ಕನ್ನಡಿಗರಿಗೆ ಬಿಗ್ ಶಾಕ್ ! ➤ಸಿಆರ್ ಪಿಎಫ್ ನೇಮಕಾತಿಗೆ ಇಂಗ್ಲಿಷ್, ಹಿಂದಿಯಲ್ಲೇ ಪರೀಕ್ಷೆ ಬರೆಯಲು ಅವಕಾಶ!

(ನ್ಯೂಸ್ ಕಡಬ) newskadaba.com.ಬೆಂಗಳೂರು,ಏ.10. ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ 9212 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿರುವ ಕೇಂದ್ರ ಸರ್ಕಾರ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.


ಸಿಆರ್ ಪಿಎಫ್ ನೇಮಕಾತಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಆಧರಿತ ಪರೀಕ್ಷೆಯನ್ನು ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಬರೆಯಬಹುದು ಎಂಬ ಷರತ್ತು ಹಾಕಿದೆ. ಈ ಮೂಲಕ ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಕೇಂದ್ರ ಸರ್ಕಾರದ ನಿರ್ಧಾರದಿಂದ ಕನ್ನಡಿಗರಿಗೆ ಶಾಕ್ ಎದುರಾಗಿದೆ.

Also Read  ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ

error: Content is protected !!
Scroll to Top