‘170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ’ ➤ ಬಿಎಸ್ ಯಡಿಯೂರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ಈ ಕುರಿತು ಮಾತನಾಡಿರುವ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು.


ಇನ್ನು ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ.

error: Content is protected !!

Join the Group

Join WhatsApp Group