(ನ್ಯೂಸ್ ಕಡಬ) newskadaba.com.ಹರಿಯಾಣ,ಏ.10 ಹರಿಯಾಣದ ಸೋನಿಪತ್‌ನ ಸಂದಲ್ ಕಲಾನ್ ಗ್ರಾಮದಲ್ಲಿ ಸುಮಾರು 20 ಜನರ ಗುಂಪೊಂದು ಮಸೀದಿಯನ್ನು ಧ್ವಂಸಗೊಳಿಸಿ ಅಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದ ನಂತರ ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ದಾಳಿ ನಡೆಸಿದವರು ಅದೇ ಗ್ರಾಮದ ಸ್ಥಳೀಯರು ಎನ್ನಲಾಗಿದೆ.
ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರು ನಿರ್ಮಿಸಿರುವ ಸಣ್ಣ ಮಸೀದಿಯಲ್ಲಿ ರಂಜಾನ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ 15-20 ಶಸ್ತ್ರಸಜ್ಜಿತ ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ದಾಳಿಕೋರರು ಕೈಯಲ್ಲಿ ಬಿದಿರು ಕೋಲು ಹಿಡಿದುಕೊಂಡು ಗ್ರಾಮದ ಬೀದಿಗಳಲ್ಲಿ ಸಂಚರಿಸುತ್ತಿರುವ ದೃಶ್ಯ ಕೂಡ ಹೊರಬಿದ್ದಿವೆ. ಈ ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.
ಪೊಲೀಸರು 19 ಮಂದಿಯ ಮೇಲೆ ಎಫ್‌ಐಆರ್ ದಾಖಲಿಸಿದ್ದು ಇಲ್ಲಿಯ ತನಕ 16 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಘಟನೆಯಲ್ಲಿ ಗಾಯಗೊಂಡವರನ್ನು ಸೋನಿಪತ್ ನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.