(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.11. ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ರಾತ್ರಿ ಬೈಕ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಬೈಕ್ ನಲ್ಲಿದ್ದ ಸವಾರರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಇವರ ಗುರುತು ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ
