ಒಳ ಮೀಸಲಾತಿ ವರ್ಗೀಕರಣ.!   ➤ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ

(ನ್ಯೂಸ್ ಕಡಬ)Newskadaba.com ದಾವಣಗೆರೆ,ಏ.11 ಒಳ ಮೀಸಲಾತಿ ವರ್ಗೀಕರಣ ಕುರಿತ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಜಿಲ್ಲಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯದವರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಸಮುದಾಯದವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತಮಗೆ ಅನ್ಯಾಯ ಮಾಡಿದೆ ಎಂದು ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

Also Read  ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

 

 

 

error: Content is protected !!
Scroll to Top