ಉಡುಪಿ: ಹದಿಹರೆಯದ ಯುವತಿ ನಾಪತ್ತೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಏ.11. ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ವರದಿ ತಿಳಿಸಿದೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ.

ಏಪ್ರಿಲ್ 7 ರಂದು ಶ್ರೀ ಲಕ್ಷ್ಮೀ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

 

error: Content is protected !!
Scroll to Top