ಲಂಚ ಪ್ರಕರಣ ➤ ಮಾಡಾಳ್ ಜಾಮೀನು ಅರ್ಜಿ ಏಪ್ರಿಲ್ 15ಕ್ಕೆ ಮುಂದುಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, .11. ಲಂಚ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿರುವ ಚೆನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 15ಕ್ಕೆ ಆದೇಶ ಕಾಯ್ದಿರಿಸಿದೆ.

ಜೊತೆಗೆ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್​ಗೆ ಜಾಮೀನು ಅರ್ಜಿ ವಜಾಗೊಳಿಸಿದರೆ ಪ್ರಕರಣ ಮೂರನೇ ಆರೋಪಿ ಸುರೇಂದ್ರಗೆ ನ್ಯಾ. ಬಿ. ಜಯಂತ್ ಕುಮಾರ್ ಜಾಮೀನು‌ ನೀಡಿದ್ದಾರೆ.  ಅರ್ಜಿದಾರ ವಿರೂಪಾಕ್ಷಪ್ಪ ಮಾಡಾಳ್​ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ. ವಿ. ನಾಗೇಶ್, ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಅರ್ಜಿದಾರರಿಗೆ ಟೆಂಡರ್ ಕರೆಯುವ ಅಧಿಕಾರವಿಲ್ಲ. ಅಧಿಕಾರಿಗಳಿಗೆ ಹಣ ಸಿಕ್ಕಿದೆ ಎನ್ನಲಾದ ಸ್ಥಳವು ಶಾಸಕರಿಗೆ ಸೇರಿಲ್ಲ. ಸುಪ್ರೀಂಕೋರ್ಟ್ ಆದೇಶದ ಪ್ರಕಾರವೂ ಬಂಧನವಾಗಿಲ್ಲ‌. ಈಗಾಗಲೇ ಲೋಕಾಯುಕ್ತ ತನಿಖಾಧಿಕಾರಿಗಳು ತನಿಖೆ ಮುಕ್ತಾಯಗೊಳಿಸಿದ್ದಾರೆ‌. ಹೀಗಾಗಿ ಮಾಡಾಳ್ ಅವರಿಗೆ ಜಾಮೀನು ನೀಡಬೇಕು‌ ಎಂದು ಮನವಿ ಮಾಡಿಕೊಂಡರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಅಭಿಯೋಜಕ ಸಂತೋಷ್ ನಾಗರಾಳೆ, ದಾಳಿ ವೇಳೆ ಹಣ ಸಿಕ್ಕಿರುವ ಮನೆಗೆ ವಿರೂಪಾಕ್ಷಪ್ಪ ಮಾಡಾಳ್​ ಅವರೇ ಮಾಲೀಕರಾಗಿದ್ದಾರೆ. ಹಣ ದೊರೆತ ಕೊಠಡಿಯಲ್ಲಿ ತಂಗುತ್ತಿದ್ದರು ಎಂದು ಪ್ರಶಾಂತ್ ಮಾಡಾಳ್​ ಪತ್ನಿ ಹೇಳಿಕೆ ನೀಡಿದ್ದಾರೆ. ಸುಪ್ರೀಂಕೋರ್ಟ್ ನಿಯಮಾವಳಿ ಪ್ರಕಾರವೇ ಆರೋಪಿತನನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿ ಹಂತದಲ್ಲಿದೆ.‌ ಈ ಹಂತದಲ್ಲಿ ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜಾಮೀನು‌ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ವಾದ ಮಂಡಿಸಿದರು.‌ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಏಪ್ರಿಲ್ 15ಕ್ಕೆ ಆದೇಶ ಕಾಯ್ದಿರಿಸಿದೆ.

ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ಕಚ್ಚಾ ವಸ್ತುಗಳ ಪೂರೈಕೆ ಸಂಬಂಧ ಟೆಂಡರ್​ ನೀಡುವ ಸಲುವಾಗಿ, ಟೆಂಡರ್​ ಆಕಾಂಕ್ಷಿಗಳಿಂದ ಲಂಚ ಪಡೆಯುತ್ತಿರುವ ವೇಳೆ ಶಾಸಕ ವಿರೂಪಾಕ್ಷಪ್ಪ ಮಾಡಾಳ್​ ಅವರ ಪುತ್ರ ಪ್ರಶಾಂತ್​ ಮಾಡಾಳ್​ ಲೋಕಾಯುಕ್ತ ಕೈಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ನಂತರದಲ್ಲಿ ಪ್ರಶಾಂತ್​ ಮಾಡಾಳ್​ ಹಾಗೂ ವಿರೂಪಾಕ್ಷಪ್ಪ ಮಾಡಾಳ್​ ಮನೆಗಳಗಳ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ಕೋಟಿ ಕೋಟಿ ರೂ ಹಣ ವಶಕ್ಕೆ ಪಡೆದಿದ್ದರು.

ಈ ಪ್ರಕರಣದ ಬೆಳವಣಿಗೆಯಲ್ಲಿ ವಿರೂಪಾಕ್ಷಪ್ಪ ಮಾಡಾಳ್​ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಾಪತ್ತೆಯಾಗಿದ್ದ ಮಾಡಾಳ್​ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆ ಲೋಕಾಯುಕ್ತ ಮಾಡಾಳ್​ ಅವರನ್ನು ಬಂಧಿಸಿತ್ತು. ನ್ಯಾಯಾಲಯ ಮಾಡಾಳ್​ ಅವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು.

error: Content is protected !!

Join the Group

Join WhatsApp Group