ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.


ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 ಕಿಮೀ ದೂರದಲ್ಲಿರುವ ಥಾಣೆ ಜಿಲ್ಲೆಯ ಶಹಾಪುರದಿಂದ ಕರೆ ಬಂದ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

Also Read  ಅಕ್ರಮ 1.47 ಕೋಟಿ ನೇಪಾಳ ಕರೆನ್ಸಿ ಹೊಂದಿದ್ದ ಆರೋಪ ➤ ಭಾರತದ ನಾಗರಿಕ ನೇಪಾಳದಲ್ಲಿ ಅರೆಸ್ಟ್

error: Content is protected !!
Scroll to Top