ತೆಂಗಿನ ಮರದಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com.ಕಡಬ, .11. ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ಯುವಕನೋರ್ವ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಹರೀಶ (29) ಮೃತಪಟ್ಟ  ವ್ಯಕ್ತಿ.

ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು  ಸಮೀಪದ ವ್ಯಕ್ತಿಯೊಬ್ಬರ ಜಾಗದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಹರೀಶರವರು ಸ್ಮೃತಿ ತಪ್ಪಿ ಕೆಳಗೆ ಬಿದ್ದರೆನ್ನಲಾಗಿದೆ. ಕೂಡಲೇ ಅಲ್ಲಿ ಇದ್ದವರು ಅಸ್ಪತ್ರೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರೆನ್ನಲಾಗಿದೆ‌. ಮೃತರು ಪತ್ನಿ, ಎರಡು ಮಕ್ಕಳು, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Scroll to Top