ಅಂಗಾರ ಮತ್ತು ಮಠಂದೂರುರವರಿಗೆ ತಪ್ಪಿದ ಬಿಜೆಪಿ ಟಿಕೆಟ್ ➤ ಸುಳ್ಯ ಹಾಗೂ ಪುತ್ತೂರಿನ ಬಿಜೆಪಿ ಅಭ್ಯರ್ಥಿಗಳು ಯಾರು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.11. ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಸುಳ್ಯದ ಬಂಗಾರ ಸಚಿವ ಎಸ್. ಅಂಗಾರ ಅವರಿಗೆ ಕೊಕ್ ನೀಡಲಾಗಿದ್ದು, ಸುಳ್ಯಕ್ಕೆ ಭಾಗೀರಥಿ ಮುರುಳ್ಯ ಅವರನ್ನು ಆಯ್ಕೆ‌ ಮಾಡಲಾಗಿದೆ.

ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಾಗಿ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ರವರಿಗೆ ಮಣೆ ಹಾಕಲಾಗಿದೆ. 189 ಕ್ಷೇತ್ರಗಳ ಬಿಜೆಪಿಯ ಮೊದಲ ಪಟ್ಟಿಯನ್ನು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ದೆಹಲಿಯಲ್ಲಿ ಬಿಡುಗಡೆಗೊಳಿಸಿದ್ದಾರೆ‌.

Scroll to Top