‘ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿ’ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು. ಇನ್ನೆರಡು ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top