ನಾಳೆಯಿಂದ ವಿಧಾನಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ರಾಜ್ಯದಲ್ಲಿ ಮೇ. 10ರಂದು ನಡೆಯಲಿರುವ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, (ನಾಳೆ)ಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇದರೊಂದಿಗೆ ವಿಧಾನಸಭೆ ಚುನಾವಣೆಯ ಅಧಿಕೃತ ಪ್ರಕ್ರಿಯೆಗಳು ಆರಂಭವಾಗಲಿವೆ.

ಏ.20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದ್ದು, ಉಮೇದುವಾರಿಕೆ ವಾಪಾಸ್‌ ಪಡೆಯಲು ಏ.24ರಂದು ಕೊನೆಯ ದಿನವಾಗಿದೆ. ಮೇ.10 ಕ್ಕೆ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

Scroll to Top