ಚುನಾವಣೆ ಘೋಷಣೆಗೂ ಮುನ್ನ ವಸ್ತು ಜಪ್ತಿ ತಪ್ಪು ➤ ಹೈಕೋರ್ಟ್‌ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.12. ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ದಾಳಿ ನಡೆಸಿ ಯಾವುದೇ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಚ್‌ ಸ್ಪಷ್ಟಪಡಿಸಿದೆ.

ಹಬ್ಬದ ಪ್ರಯುಕ್ತ ಜನರಿಗೆ ವಿತರಿಸಲು ದಾಸ್ತಾನು ಮಾಡಲಾಗಿದ್ದ 530 ಅಕ್ಕಿ ಮೂಟೆಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದು, ಅದನ್ನು ಹಿಂದಿರುಗಿಸಲು ನಿರ್ದೇಶಿಸಬೇಕು ಎಂದು ಕೋರಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಇಷ್ತಿಯಾಕ್‌ ಅಹ್ಮದ್‌ ಎಂಬುವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿ, ಅಕ್ಕಿ ಮೂಟೆಗಳನ್ನು ವಾಪಸ್‌ ನೀಡುವಂತೆ ನಿರ್ದೇಶಿಸಿದೆ.

Also Read  ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ➤7 ಆರೋಪಿಗಳ ಅರೆಸ್ಟ್

 

error: Content is protected !!
Scroll to Top