ರಾಜಕೀಯದಿಂದ ನಿವೃತ್ತಿ ಘೋಷಿಸಿದ ಎಸ್.ಅಂಗಾರ

(ನ್ಯೂಸ್ ಕಡಬ)newskadaba.com ಸುಳ್ಯ, ಏ.12. ರಾಜಕೀಯದಿಂದ ಶಾಸಕ ಎಸ್.ಅಂಗಾರ ನಿವೃತ್ತಿ ಹೊಂದುವುದಾಗಿ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ.

ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಹೇಳಿದರು.

Also Read  ನೆಲ್ಯಾಡಿ: ಬೈಕ್ ಹಾಗೂ ಲಾರಿ ನಡುವೆ ಢಿಕ್ಕಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

error: Content is protected !!
Scroll to Top