ಉಳ್ಳಾಲ: ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯಲಿದ್ದೇವೆ ➤ ಅಭ್ಯರ್ಥಿ ಸತೀಶ್ ಕುಂಪಲ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಏ.12. ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.

ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮಾತನಾಡಿದ ಅವರು ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಿನೊಂದಿಗೆ ದುಡಿಯುವ ಪಣ ತೊಟ್ಟಿದ್ದೇವೆ. ಕುಡಿಯುವ ನೀರಿನ ಸಮಸ್ಯೆಯಿಂದ ಹಿಡಿದು ಅನೇಕ ಸಮಸ್ಯೆಗಳು ಕ್ಷೇತ್ರದ ಜನತೆ ಅನುಭವಿಸುತ್ತಾ ಬಂದಿದ್ದಾರೆ. ಧೋರಣೆ ನೀತಿಯನ್ನು ನಿಲ್ಲಿಸಲು ಬಿಜೆಪಿಯ ಗೆಲುವು ಅನಿವಾರ್ಯ .

Also Read  ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

 

error: Content is protected !!
Scroll to Top