ಟೆಸ್ಟ್ ಪಂದ್ಯದಲ್ಲಿ ‘ಶತಕ’ ಸಿಡಿಸಿದ ‘ವಿರಾಟ್ ಕೊಹ್ಲಿ’

(ನ್ಯೂಸ್ ಕಡಬ)newskadaba.com  ಅಹಮದಾಬಾದ್, ಏ.12. ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕ ಭಾರಿಸಿದ್ದಾರೆ. ಮೂರು ವರ್ಷಗಳ ಬಳಿಕ ಕೋಹ್ಲಿ 100 ರನ್ ಗಳನ್ನು ಸಿಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ಏಷ್ಯಾ ಕಪ್ 2022ರಲ್ಲಿ ವಿರಾಟ್ ಕೊಹ್ಲಿ ತಮ್ಮ ಮೊದಲ ಟಿ20 ಶತಕ ದಾಖಲಿಸಿದ್ದರು. ಇದೀಗ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 3 ವರ್ಷಗಳ ನಂತರ 100 ರನ್ ಗಡಿ ದಾಟಿದ್ದಾರೆ. ಇದು ಅವರ ಅಂತಾರಾಷ್ಟ್ರೀಯ ವೃತ್ತಿ ಬದುಕಿನ 28ನೇ ಟೆಸ್ಟ್ ಶತಕವಾಗಿದೆ. ಇದಕ್ಕೂ ಮೊದಲು 22 ನವೆಂಬರ್ 2019 ರಂದು, ಅವರು ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನಲ್ಲಿ ಶತಕವನ್ನು ಗಳಿಸಿದ್ದರು.

Also Read  ಪಂಜ: ಮಕ್ಕಳ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

error: Content is protected !!
Scroll to Top