(ನ್ಯೂಸ್ ಕಡಬ)newskadaba.com ಮಂಗಳೂರು, ಏ.13. ನಂಬರ್ ಪ್ಲೇಟ್ ಅಳವಡಿಸದ, ನಂಬರ್ ಪ್ಲೇಟ್ ನಿಯಮ ಮೀರಿದ ವಾಹನಗಳ ವಿರುದ್ದ ನಗರದಾದ್ಯಂತ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಾರ್ಯಾಚರಣೆ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ಯಾನ್ಸಿ ನಮ್ಬರ್ ಪ್ಲೇಟ್, ಅಸಮರ್ಪಕ ನಂಬರ್ ಪ್ಲೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 87 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ.