(ನ್ಯೂಸ್ ಕಡಬ)newskadaba.com ಅಂಕೋಲಾ, ಏ.13. ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಂಕೋಲಾದ ಶೋಭಾ ಗೋಪಾಲ(28) ಮೃತಪಟ್ಟವರಾಗಿದ್ದಾರೆ.
ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.