(ನ್ಯೂಸ್ ಕಡಬ)newskadaba.com ಉಡುಪಿ, ಏ.13. ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ನಡೆದಿದೆ.
ಮುಖ್ಯಮಂತ್ರಿಗಳ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ.
