ಶೆಟ್ಟರ್ ಗೆ ಟಿಕೆಟ್ ಖಚಿತ, ಎರಡನೇ ಪಟ್ಟಿ ಇಂದೇ ಬಿಡುಗಡೆ’ ➤ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com. ಬೆಂಗಳೂರು, .13.  ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಪಕ್ಷ ಟಿಕೆಟ್ ಸಿಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್​ ಹಂಚಿಕೆಯಲ್ಲಿ 2-3 ಕಡೆ ಗೊಂದಲ ಇದೆ ಅಷ್ಟೇ. ಉಳಿದ ಎಲ್ಲಾ ಕಡೆ ಒಳ್ಳೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ಪ್ರಕಟಿಸಿದೆ. ಉಳಿದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ರಾತ್ರಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Also Read  ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

ಹತ್ತಾರು ಬಾರಿ ಯೋಚನೆ ಮಾಡಿಯೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿವುದು.ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿಗೆ ಪಕ್ಷ ಎಲ್ಲ ಸ್ಥಾನಮಾನವೂ ಕೊಟ್ಟರೂ ಈ ರೀತಿ ತೀರ್ಮಾನ ಮಾಡಿದ್ದಾರೆ. ಒಂದಿಬ್ಬರು ಬೇರೆ ಕಡೆ ಹೋಗಬಹುದು. ಆದರೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಈ ಬಾರಿ 125 – 130 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಿಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top