(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಕಳೆದ ಮೂರ್ನಾಲ್ಕು ದಿನಗಳ ಹಿಂದೇ 3ನೇ ಪಟ್ಟಿಗಾಗಿ ಕಸರತ್ತು ನಡೆಸಿರುವ ಕಾಂಗ್ರೆಸ್ ಬಿಜೆಪಿಯ ಪಟ್ಟಿ ಬಿಡುಗಡೆಯಾದ ನಂತರ ಕೆಲವೊಂದು ಬದಲಾವಣೆಗಳನ್ನು ಮಾಡಿ ನಾಳೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯ ಕಸರತ್ತು ಬಹುತೇಕವಾಗಿ ಪೂರ್ಣಗೊಂಡಿದೆ. ಆದರೆ, ಕಾಂಗ್ರೆಸ್ ಈಗಾಗಲೇ ಬಿಡುಗಡೆ ಮಾಡಿರುವ ಎರಡು ಪಟ್ಟಿಗಳಲ್ಲಿ ಯಾವುದೇ ಗೊಂದಲಗಳು ಇಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದ್ದು, 58 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡುವುದು ಬಾಕಿಯಿದೆ. ಆದರೆ, ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಬಹುತೇಕ ಗೊಂದಲದ ವಾತಾವರಣವಿದ್ದು, ಒಬ್ಬರಿಗೆ ಟಿಕೆಟ್ ಕೊಟ್ಟರೆ ಮತ್ತೊಬ್ಬರು ಬಂಡಾಯ ಏಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೇ 3ನೇ ಪಟ್ಟಿಗಾಗಿ ಕಸರತ್ತು ನಡೆಸಿರುವ ಕಾಂಗ್ರೆಸ್ ಬಿಜೆಪಿಯ ಪಟ್ಟಿ ಬಿಡುಗಡೆಯಾದ ನಂತರ ಕೆಲವೊಂದು ಬದಲಾವಣೆಗಳನ್ನು ಮಾಡಿ ನಾಳೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
