ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಏ.13. ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಇವರೊಂದಿಗೆ ಪತ್ನಿ ಚೆನ್ನಮ್ಮ ಇದ್ದರು ಎನ್ನಲಾಗಿದೆ.

ಬೊಮ್ಮಾಯಿ(CM Basavaraj Bommai) ಅವರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಸೀತರಾಮ ಯಡಪಡಿತ್ತಾಯ ಶಾಲು ಹೊದೆಸಿ ದೇವರ ಪ್ರಸಾದ ನೀಡಿ ಹರಸಿದರು. ಬಳಿಕ ಸಂಪುಟ ನರಸಿಂಹ ಸ್ವಾಮಿ ದೇವರ ದರುಶನ ಪಡೆದರು. ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

Also Read  ಹಾಡುಹಗಲೇ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸರ ಎಗರಿಸಿ ಪರಾರಿ

error: Content is protected !!
Scroll to Top