ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಬೀದಿ ದೀಪದ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ಮೊಬೈಲ್‌ ವ್ಯಾಪಾರಿಯೊಬ್ಬರು ಪ್ರಾಣ ತೆತ್ತಿರುವ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ಅಕ್ಬರ್‌ ಅಲಿ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಡಿವಾಳದ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪದ ಅಲಿ ನಡೆದುಕೊಂಡು ಹೋಗುವಾಗ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top