ಕುಖ್ಯಾತ ಸರಗಳ್ಳರು ಅರೆಸ್ಟ್ ➤ 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಕನ್ನ ಕಳವು ಮಾಡುತ್ತಿದ್ದ ಮಹಿಳೆ ಸೇರಿ ಮೂವರು ಕುಖ್ಯಾತ ಕನ್ನಗಳ್ಳರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 1 ಕೋಟಿ ಮೌಲ್ಯದ 2 ಕೆ.ಜಿ ಚಿನ್ನಾಭರಣಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.


ಗುಜರಾತ್ ಹಾಗೂ ತಮಿಳುನಾಡಿನಿಂದ ನಗರಕ್ಕೆ ಬಂದು ನಗರದ ವಿವಿಧ ಕಡೆಗಳಲ್ಲಿ ಸಹಚರರೊಂದಿಗೆ ಸೇರಿ ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರ್ತಿಸಿ ಹಗಲು ಮತ್ತು ರಾತ್ರಿ ವೇಳೆಯಲ್ಲಿ ತನ್ನ ಸಹಚರರೊಂದಿಗೆ ಸೇರಿಕೊಂಡು ಕನ್ನ ಕಳವು ಮಾಡುತ್ತಿದ್ದ ಮೂವರು ಕನ್ನಗಳ್ಳರ ಬಂಧನದಿಂದ 15 ಮನೆಗಳವು ಪ್ರಕರಣಗಳು ಪತ್ತೆಯಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Also Read  ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣ ➤ SYS ದ.ಕ (ಈಸ್ಟ್) ಖಂಡನೆ

error: Content is protected !!
Scroll to Top