ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ ಹಿನ್ನೆಲೆ ➤ ಮೊದಲ ದಿನವೇ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. ಚುನಾವಣೆಗೆ ಅಧಿಸೂಚನೆಯೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ ರಾಜ್ಯಾದ್ಯಾಂತ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿಯ 27 ಅಭ್ಯರ್ಥಿಗಳು, ಕಾಂಗ್ರೆಸ್​ನ 26, ಎಎಪಿ 10, ಜೆಡಿಎಸ್​ 12, 45 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.ನೋಂದಾಯಿಯ ಮಾನ್ಯತೆ ಹೊಂದಿರದ ಪಕ್ಷಗಳು 100 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಇನ್ನು ನಾಮಪತ್ರ ಸಲ್ಲಿಕೆಗೆ ಏಪ್ರಿಲ್​ 20 ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿ ಪಡಿಸಿದ್ದು, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಲ್ಲಿಸಬಹುದಾಗಿದೆ ಎನ್ನಲಾಗಿದೆ.

Also Read  ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

 

 

error: Content is protected !!
Scroll to Top