ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ವ್ಯಾನ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.14. ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಅಂಗಡಿ ಹಾಗೂ ಗ್ಯಾರೇಜ್ ಗೆ ನುಗ್ಗಿದ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ.

ಮರೋಳಿಯಲ್ಲಿರುವ ವೃಧ್ದಾಶ್ರಮಕ್ಕೆ ಸೇರಿದ ವ್ಯಾನ್ ಇದಾಗಿದ್ದು, ಚಾಲಕನಿಗೆ ಅಪಸ್ಮಾರ ಕಾಣಿಸಿಕೊಂಡ ಕಾರಣ ವಾಹನ ನಿಯಂತ್ರಣ ಕಳೆದುಕೊಂಡಿದೆ. ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿರಲಿಲ್ಲ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿ ತಿಳಿಸಿದೆ.

 

Scroll to Top