ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

error: Content is protected !!
Scroll to Top