ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ, ನಾಗೇಂದ್ರ ಗಣಪತಿ, ಅವಿಶ್ ಡಿ ಸೋಜ, ಜೋಯ್ ಸನ್ ಲೂವಿಸ್ ಎಂಬವರಿಂದ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದ ಲೀನಾ ಅವರಿಂದ ಫೆ.2 ರಿಂದ ಮಾ.12 ರವರೆಗೆ ಹಂತಹಂತವಾಗಿ ಗೂಗಲ್ ಪೇ ಮೂಲಕ ಒಟ್ಟು ರೂ.2.82.000/- ಹಣವನ್ನು ಪಡೆದು, ನಂತರ ಉದ್ಯೋಗವನ್ನು ಕೊಡಿಸದೆ ವಂಚಿಸಿದ್ದಾರೆ. ದೂರುದಾರರು ಹಣವನ್ನು ವಾಪಸ್ಸು ಕೇಳಿದರೂ ಹಿಂತಿರುಗಿಸದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Scroll to Top