(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್ ಬಾರ್ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್ ಅಲಿಯಾಸ್ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
