ಟಿಕೆಟ್ ದೊರೆಯುವ ವಿಶ್ವಾಸದಲ್ಲಿ – ಜಗದೀಶ ಶೆಟ್ಟರ್

(ನ್ಯೂಸ್ ಕಡಬ) newskadaba.com. ಹುಬ್ಬಳ್ಳಿ, .14.  ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನನ್ನನ್ನು ದೆಹಲಿಗೆ ಬರುವಂತೆ ತಿಳಿಸಿದ್ದರಿಂದ ಹೋಗಿದ್ದೆ. ಈ ವೇಳೆ ಅವರೊಂದಿಗೆ ಎಲ್ಲಾ ವಿಚಾರಗಳನ್ನು ತಿಳಿಸಿದ್ದೇನೆ. ನನಗೆ ಟಿಕೆಟ್ ದೊರೆಯಲಿದೆ ಎನ್ನುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ದೆಹಲಿಯಿಂದ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರು ನನ್ನ ಎಲ್ಲಾ ವಿಚಾರಗಳನ್ನು ಸಮಧಾನದಿಂದ ಕೇಳಿದ್ದಾರೆ. ಈ ಕುರಿತು ರಾಜ್ಯ ಹಾಗೂ ರಾಷ್ಟ್ರ ನಾಯಕರೊಂದಿಗೆ ಮಾತನಾಡಿ ಸೂಕ್ತ ಪರಿಹಾರ ನೀಡುತ್ತೇವೆ. ಒಂದೆರಡು ದಿನ ಸಮಯವಾಕಾಶ ನೀಡುವಂತೆ ತಿಳಿಸಿದ್ದರಿಂದ ವಾಪಸ್ಸು ಬಂದಿದ್ದೇನೆ ಎಂದರು.

Also Read  ಉಪ್ಪಿನಂಗಡಿ ಪೊಲೀಸರ ಬರ್ಬರ ಲಾಠಿ ಚಾರ್ಜ್ ಖಂಡಿಸಿ ಮಂಗಳೂರಿನಲ್ಲಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

ಇನ್ನು ನನಗೆ ಟಿಕೆಟ್ ನೀಡುವಂತೆ ಬೇಡಿಕೆಯಿಟ್ಟಿದ್ದೇನೆಯೇ ಹೊರತು, ಮಗನಿಗೆ ಅಥವಾ ಇನ್ನಾರಿಗೋ ಕೊಡುವಂತೆ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಇದೇ ವಿಚಾರದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಕೂಡ ಮಾತನಾಡಿದ್ದೇನೆ. ಅವರು ಕೂಡ ಜೆ.ಪಿ.ನಡ್ಡಾ, ಅಮಿತ್ ಶಾ ಸೇರಿದಂತೆ ಹಲವು ನಾಯಕರೊಂದಿಗೆ ಮಾತನಾಡಿದ್ದಾರೆ. ನನಗೆ ಟಿಕೆಟ್ ನೀಡುವಂತೆ ತಿಳಿಸಿದ್ದಾರೆ ಎಂದರು.

error: Content is protected !!
Scroll to Top