ಏಪ್ರಿಲ್ 3 ನೇ ವಾರದಲ್ಲಿ `ದ್ವಿತೀಯ ಪಿಯುಸಿ’ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.14. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 5 ರಿಂದ ಆರಂಭವಾಗಿದ್ದು, ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.


ರಾಜ್ಯಾದ್ಯಂತ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಏಪ್ರಿಲ್ 5 ರಿಂದ 65 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಶುರುವಾಗಿದೆ. ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಲಾಗಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

error: Content is protected !!
Scroll to Top