ಸುಳ್ಯ: ಸ್ಕೂಟಿ ಕದ್ದು ನಿದ್ದೆ ಮಾಡಿ ಸಿಕ್ಕಿಬಿದ್ದ ಕಳ್ಳ !

(ನ್ಯೂಸ್ ಕಡಬ)newskadaba.com ಸುಳ್ಯ, ಏ.17. ಕಳ್ಳನೋರ್ವ ಒಂದು ಸ್ಕೂಟಿ ಕದ್ದುಕೊಂಡು ಬಂದು ಹೋಟೆಲ್ ಒಂದರ ಶೌಚಾಲಯದಲ್ಲಿ ನಿದ್ದೆ ಮಾಡಿ ಕೊನೆಗೆ ಪೊಲೀಸ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.


ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಉಡುಪಿಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವೊಂದರಿಂದ ಸ್ಕೂಟಿ ಕದ್ದಿದ್ದ. ಅದನ್ನು ಮಂಡ್ಯದತ್ತ ತೆಗೆದುಕೊಂಡು ಹೋಗುವ ದಾರಿಯಲ್ಲಿ ಸುಳ್ಯ ಸಮೀಪದ ಗೂನಡ್ಕದ ದೊಡ್ಡಡ್ಕದಲ್ಲಿರುವ ತಾಜುದ್ದೀನ್ ಟರ್ಲಿ ಎಂಬುವವರ ಇಂಡಿಯನ್ ಗೇಟ್ ಹೋಟೆಲ್ ನಲ್ಲಿ ಟೀ ಕುಡಿಯಲೆಂದು ವಾಹನ ನಿಲ್ಲಿಸಿದ್ದಾನೆ ಎಂದು ವರದಿ ತಿಳಿಸಿದೆ.

error: Content is protected !!
Scroll to Top