ಸುಳ್ಯ: ಕಾರು – ಬಸ್ ನಡುವೆ ಭೀಕರ ಅಪಘಾತ ➤ ಆರು ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಸುಳ್ಯ, ಎ.14. ಬಸ್ ಮತ್ತು ಕಾರು ನಡುವೆ ಉಂಟಾದ ಭೀಕರ ಅಪಘಾತದಲ್ಲಿ 6 ಮಂದಿ ಮೃತಪಟ್ಟಿರುವ ದಾರುಣ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆಯಲ್ಲಿ ನಡೆದಿದೆ.

ಕಾರು ಮತ್ತು ಬಸ್ ನಡುವೆ ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಅಪಘಾತ ನಡೆದಿದ್ದು ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರನ್ನು ಮಂಡ್ಯ ಮೂಲದವರೆಂದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

 

Scroll to Top