➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಾರು ಪರಿಶೀಲನೆ

(ನ್ಯೂಸ್ ಕಡಬ) newskadaba.com, ಚಾರ್ಮಾಡಿ,  ಏ.15. ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿರುವ ಇನೋವಾ ಕಾರು ಹಾಗೂ ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Also Read  ಬೆಂಗಳೂರು: BMTC ಯ 32 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು

ಚಾರ್ಮಾಡಿ ಚೆಕ್ ಪೋಸ್ಟ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ವಾಹನಗಳು ದ.ಕ ಜಿಲ್ಲೆಗೆ ಪ್ರವೇಶಿಸುತ್ತಿದ್ದು, ಅಂತರ್ ಜಿಲ್ಲಾ ಚೆಕ್ ಪೋಸ್ಟ್ ಆಗಿರುವ ಇಲ್ಲಿ ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸಲಾಗುತ್ತಿದೆ.

error: Content is protected !!
Scroll to Top