(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈತನು ಬಯಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.