ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

crime, arrest, suspected

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.

ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆನ್ನಲಾಗಿದೆ.

Also Read  ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆಯುತ್ತಿದ್ದ ವ್ಯಕ್ತಿಯ ಅರೆಸ್ಟ್

 

error: Content is protected !!
Scroll to Top