KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Scroll to Top