(ನ್ಯೂಸ್ ಕಡಬ)newskadaba.com ನವದೆಹಲಿ, ಏ.15. ದೆಹಲಿಯ ದ್ವಾರಕಾ ಜಿಲ್ಲೆಯ ಬಿಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಟಿಯಾಲ ರಸ್ತೆಯಲ್ಲಿರುವ ಅವರ ಕಚೇರಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.
ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿದರು ಎಂದು ಮೃತ ರಾಮ್ ಸಿಂಗ್ ಅವರ ಸೋದರ ಸಂಬಂಧಿ ತಿಳಿಸಿದ್ದಾರೆ.
