ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣ ಜಪ್ತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣದ ಸದ್ದು‌ ಜೋರಾಗಿದೆ. ತಡರಾತ್ರಿ ಬಸವನಗುಡಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ಹಣವನ್ನ ಜಪ್ತಿ ಮಾಡಿದ್ದಾರೆ‌. ರಿಷಭ್ ಎಂಬಾತನಿಂದ ಹಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಹ್ಯುಂಡೈ ಕ್ರೆಟಾ ಕಾರಿನಲ್ಲಿ ಹೋಗುತ್ತಿದ್ದ ರಿಷಭ್ ಎಂಬಾತನನ್ನ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದರು. ಈ ವೇಳೆ 2 ಸಾವಿರ, 500 ಹಾಗೂ‌ 200 ರೂ. ಮುಖಬೆಲೆಯ ಒಟ್ಟು 18 ಲಕ್ಷ ರೂ‌ ನಗದು ಪತ್ತೆಯಾಗಿದೆ. ಸದ್ಯ ಹಣವನ್ನ ವಶಕ್ಕೆ ಪಡೆಯಲಾಗಿದ್ದು, ರಿಷಭ್ನನ್ನ ವಿಚಾರಣೆ ನಡೆಸಲಾಗುತ್ತಿದೆ.

Scroll to Top