(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ಹಿಂದುಗಳನ್ನು ಕೆರಳಿಸುವಂಥ ಹೇಳಿಕೆಗಳನ್ನು ನೀಡುವ ಮೂಲಕವೇ ಸುದ್ದಿಯಾಗುತ್ತಿದ್ದ ನಟ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ನಟ ಚೇತನ್ ವೀಸಾ ರದ್ದುಗೊಳಿಸಿ ಕೇಂದ್ರ ಗೃಹ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಸಾಗರೋತ್ತರ ಭಾರತೀಯ ನಾಗರೀಕ ವೀಸಾ ಹೊಂದಿದ್ದ ಚೇತನ್, ಹೋರಾಟದ ಮೂಲಕವೇ ಇಲ್ಲಿ ಸುದ್ದಿಯಾಗಿದ್ದರು. ಏಪ್ರಿಲ್ 14 ರಂದು, ಚೇತನ್ ಅವರು ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
