(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.15. ನಾವು ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲೇ ಜಗದೀಶ್ ಶೆಟ್ಟರ್ ಹಾಗೂ ನಾನು ಸ್ನೇಹಿತರು. ಅವರಿಗೆ ಟಿಕೆಟ್ ತಪ್ಪಿಸುವ ಕೆಲಸ ಮಾಡುತ್ತಿಲ್ಲ. ಅವರ ಬೆಂಬಲಿಗರ ಮಾತಿನಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ನಿತ್ಯವೂ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ ತಪ್ಪಿಸಲು ಕೆಲಸ ಮಾಡುತ್ತಿದ್ದಾರೆ ಎನ್ನುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.
