ಮಂಗಳೂರು: ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅವಘಡ ► ನಿಟ್ಟುಸಿರು ಬಿಟ್ಟ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.11. ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿದ್ದ ಭಾರೀ ಅವಘಡವೊಂದು ಏರ್ ಟ್ರಾಫಿಕ್ ಕಂಟ್ರೋಲರ್ ನ ಸಮಯ ಪ್ರಜ್ಞೆಯಿಂದಾಗಿ ಕೂದಲೆಳೆಯ ಅಂತರದಲ್ಲಿ ತಪ್ಪಿದ ಘಟನೆ ಗುರುವಾರದಂದು ನಡೆದಿದೆ.

ಮಂಗಳೂರು ವಿಮಾನ ನಿಲ್ದಾಣದ ರನ್ ವೇ ಸುತ್ತಲಿದ್ದ ಹುಲ್ಲು ತೆಗೆಯುವುದಕ್ಕಾಗಿ ಬಂದಿದ್ದ ಟ್ರಾಕ್ಟರನ್ನು ಅದರ ಚಾಲಕ ರನ್ ವೇ ಅಂತ್ಯದಲ್ಲಿ ನಿಲ್ಲಿಸಿದ್ದ. ಅದಾಗಲೇ ಮುಂಬೈಗೆ ಹೊರಡಬೇಕಿದ್ದ ಜೆಟ್ ಏರ್ ವೇಸ್ ವಿಮಾನವು ಟೇಕ್ ಆಫ್ ಆಗುವ ಸಿದ್ಧತೆಯಲ್ಲಿರುವಾಗ ಟ್ರಾಕ್ಟರ್ ರನ್ ವೇ ಯಲ್ಲಿ ಇರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ನೋಡಿದ್ದಾರೆ. ತಕ್ಷಣವೇ ವಿಮಾನದ ಟೇಕಾಫ್ ನ್ನು ರದ್ದುಗೊಳಿಸಿ ಸಂಭಾವ್ಯ ಅವಘಡವೊಂದನ್ನು ತಪ್ಪಿಸಿದ್ದಾರೆ. 2010 ರ ವಿಮಾನ ಅವಘಡದ ನೆನಪು ಮಾಸುವ ಮುನ್ನವೇ ಸಂಭಾವ್ಯ ಅಪಾಯವನ್ನು ತನ್ನ ಸಮಯ ಪ್ರಜ್ಞೆಯಿಂದಾಗಿ ಏರ್ ಟ್ರಾಫಿಕ್ ಕಂಟ್ರೋಲರ್ ತಪ್ಪಿಸಿ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಯಿತು.

Also Read  ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ ಪ್ರೆಸ್ ರೈಲು !  

error: Content is protected !!
Scroll to Top