ಟೈರ್ ಸ್ಫೋಟಗೊಂಡು ಕಾರು ಅಪಘಾತ – ಮಾಜಿ ಶಾಸಕಿ ನೀರಜಾ ರೆಡ್ಡಿ ಮೃತ್ಯು..!

(ನ್ಯೂಸ್ ಕಡಬ) newskadaba.com. ತೆಲಂಗಾಣ, .17. ಕಾರು ಅಪಘಾತಗೊಂಡ ಪರಿಣಾಮ  ಬಿಜೆಪಿ ಉಸ್ತುವಾರಿ ಹಾಗೂ ಮಾಜಿ ಶಾಸಕಿ ನೀರಜಾ ರೆಡ್ಡಿ ನಿಧನರಾಗಿರುವ ಘಟನೆ ತೆಲಂಗಾಣದ ಬೀಚುಪಲ್ಲಿಯಲ್ಲಿ ನಡೆದಿದೆ.

ಹೈದರಾಬಾದ್‌ನಿಂದ ಕರ್ನೂಲ್‌ಗೆ ಹಿಂತಿರುಗುತ್ತಿದ್ದಾಗ ತೆಲಂಗಾಣದ ಬೀಚುಪಲ್ಲಿ ಎಂಬಲ್ಲಿ ಕಾರಿನ ಟೈರ್ ಸ್ಫೋಟಗೊಂಡು ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಇನ್ನು ನೀರಜಾರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

2009ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಲೂರು ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿದ್ದ ನೀರಜಾ ರೆಡ್ಡಿ, 2019ರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ನಂತರ ಅವರು ಬಿಜೆಪಿಗೆ ಪಕ್ಷಾಂತರರಾಗಿದ್ದರು.

Scroll to Top