ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.18. ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಬಿ.ಸಿ ರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಇನ್ನು ಢಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

 

Scroll to Top