ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ.

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ

 

error: Content is protected !!
Scroll to Top