ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ..!

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.


ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು, ಅವರು ಕೋಲ ಮುಗಿಸಿ ತನ್ನ ರಿಟ್ಸ್ ಕಾರಿನಲ್ಲಿ ಮಣಿಪಾಲ ಕಡೆಯಿಂದ ಉಡುಪಿ ಕಡೆ ಬರುತ್ತಿದ್ದರು. ಈ ವೇಳೆ ಕಾರಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಿಂದ ಇಳಿದ ಮುರಳಿಧರ್ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದರು. ಆದರೆ ಬೆಂಕಿಯು ಇಡೀ ಕಾರಿಗೆ ವಿಸ್ತರಿಸಿದ್ದು, ಕೂಡಲೇ ಇವರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

Scroll to Top