ಚುನಾವಣೆಯಲ್ಲಿ ಸ್ಪರ್ಧೆಗೆ ಪಕ್ಷ ಟಿಕೆಟ್ ಕೊಟ್ಟಿಲ್ಲ ಎಂದು ಬಿಜೆಪಿ ಯುವನಾಯಕ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಏ.18. ಪುರಸಭೆ ಚುನಾವಣೆಗೆ ಟಿಕೆಟ್ ಸಿಕ್ಕಿಲ್ಲ‌ ಎಂದು ಬಿಜೆಪಿ‌ ಸ್ಥಳೀಯ ನಾಯಕ‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಿಂದ ವರದಿಯಾಗಿದೆ.

ಉತ್ತರಪ್ರದೇಶದಲ್ಲಿ ಪುರಸೆಭೆಯ ಕೆಲ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ದೀಪಕ್ ಸೈನಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಕಳೆದ ಪುರಸಭೆ ಚುನಾವಣೆಯಲ್ಲಿ 19ನೇ ವಯಸ್ಸಿನಲ್ಲಿ ಬಿಜೆಪಿ ಚಿಹ್ನೆಯ ಮೇಲೆ ಸ್ಪರ್ಧಿಸಿ ಗೆದ್ದಿದ್ದರು. ಪಕ್ಷಕ್ಕಾಗಿ ದುಡಿದಿದ್ದ ಅವರು ಟಿಕೆಟ್ ಸಿಗದಿದ್ದಕ್ಕೆ ಮನನೊಂದು ವಿಷ ಸೇವಿಸಿ ಜೀವನ ಅಂತ್ಯಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ.

Also Read  11 ಗಂಟೆಗೆ ಮೋದಿ ಮನ್ ಕಿ ಬಾತ್ ➤ ಜನತಾ ಸಲಹೆಗಳ ಬುತ್ತಿ ಬಿಚ್ಚಿಡಲಿರುವ ಪ್ರಧಾನಿ

 

error: Content is protected !!
Scroll to Top