ಇಂದು(ಜ.12) ದೀಪಕ್ ಮತ್ತು ಬಶೀರ್ ರಿಗೆ ಸಂತಾಪ ಸೂಚಕ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.12. ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮತ್ತು ಬಶೀರ್ ರವರಿಗೆ ದ.ಕ ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಸಹಯೋಗದಲ್ಲಿ ಸಂತಾಪ ಸೂಚನೆ ಮತ್ತು ಹತ್ಯೆಯ ವಿರುದ್ಧ ಖಂಡನಾ ಸಭೆಯು ಇಂದು (ಜನವರಿ 12) ಅಪರಾಹ್ನ 3 ಗಂಟೆಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿದೆ.

ಇತ್ತೀಚಿನ ದಿನಗಳಲ್ಲಿ ಕರಾವಳಿಯಲ್ಲಿ ಕೋಮು ಸಂಘರ್ಷಗಳು ಹೆಚ್ಚಾಗುತ್ತಿದ್ದು, ಅಮಾಯಕರು ಬಲಿಯಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಜ್ಞಾವಂತ ನಾಗರೀಕರು ರಾಜಕಾರಣಿಗಳ ನೀಚ ರಾಜಕೀಯದ ವಿರುದ್ಧ ಧ್ವನಿಯೆತ್ತಬೇಕಾಗಿರುವುದರಿಂದ ಶುಕ್ರವಾರದಂದು ನಡೆಯಲಿರುವ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದ.ಕ ಜಿಲ್ಲಾ ಮುಸ್ಲಿಮ್ ಸಂಘಟನೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

Also Read  ತೈಲ ಬೆಲೆಯೇರಿಕೆ ವಿರೋಧಿಸಿ ಎಸ್ಡಿಪಿಐ ವತಿಯಿಂದ ಬೆಳ್ತಂಗಡಿಯಾದ್ಯಂತ ಪ್ರತಿಭಟನೆ

 

error: Content is protected !!
Scroll to Top