ಕ್ಷಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.!   ➤ದೂರು ದಾಖಲು.!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಮಾತನಾಡಿದ್ದಾರೆಂದು ಅಪ್ಪಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ವಿಚಾರವನ್ನು ಸೋನು ಪೂಜಾರಿ ಪತಿ ನಿರಂಜನ್ ಅವರಿಗೆ ಮಾಹಿತಿಯನ್ನು ನೀಡಲಾಗಿದೆ.

Also Read  ಬೆಳ್ತಂಗಡಿ: ಸ್ನೇಹಿತರೊಂದಿಗೆ ಜಲಪಾತ ವೀಕ್ಷಣೆಗೆಂದು ತೆರಳಿದ್ದ ಯುವಕ ನೀರುಪಾಲು

 

 

 

 

 

 

 

 

 

 

error: Content is protected !!
Scroll to Top