ಇಂದು (ಜ.12) ಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡಕ್ಕೆ ► ದೀಪಕ್, ಬಶೀರ್ ನಿವಾಸಕ್ಕೆ ಭೇಟಿ ನೀಡಲಿರುವ ಸಚಿವರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.12. ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಒಂದು ದಿನದ ಭೇಟಿಗಾಗಿ ಇಂದು (ಜ.12) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 8.55 ಕ್ಕೆ ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 9.15 ಕ್ಕೆ ಶಕ್ತಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 10 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಛೇರಿ ಮತ್ತು ಪಶ್ಚಿಮ ವಲಯ ವ್ಯಾಪ್ತಿಗೆ ಒಳಪಡುವ ಜಿಲ್ಲೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ 12 ಗಂಟೆಗೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಲಿದ್ದಾರೆ. ಸಂಜೆ ಮಂಗಳೂರಿಗೆ ಹಿಂತಿರುಗಿ ಇತ್ತೀಚೆಗೆ ದುಷ್ಕರ್ಮಿಗಳಿಗೆ ಬಲಿಯಾದ ದೀಪಕ್ ರಾವ್ ಮತ್ತು ಬಷೀರ್ ರವರ ಮನೆಗಳಿಗೆ ಭೇಟಿ ನೀಡಿ ರಾತ್ರಿ 7.35 ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Also Read  ಸೆ. 01ರಂದು CET, NEET ಸೀಟು ಹಂಚಿಕೆ ಫಲಿತಾಂಶ ಪ್ರಕಟ

error: Content is protected !!
Scroll to Top